ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ‌, ಸಾಮರಸ್ಯ ಕದಡುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Published 27 ಮೇ 2023, 6:31 IST
Last Updated 27 ಮೇ 2023, 6:31 IST
ಅಕ್ಷರ ಗಾತ್ರ

ಬೆಂಗಳೂರು: ಯಾವುದೇ ಸಂಘಟನೆ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂಘ ಪರಿವಾರ (ಆರ್‌ಎಸ್‌ಎಸ್‌) ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶನಿವಾರ ಅಥವಾ ಭಾನುವಾರ ಎಲ್ಲ‌ ಸಚಿವರಿಗೂ ಖಾತೆ ಹಂಚಿಕೆ‌ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT