ನವದೆಹಲಿ: ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆಯಿಂದ (ಎಸ್ಟಿಆರ್ಆರ್) ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ದೂರಿದರು.

ಲೋಕಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘2021 ರಲ್ಲಿ ಈ ಯೋಜನೆಗಾಗಿ ಸುಮಾರು 2,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದಾಗ್ಯೂ, ಇಲ್ಲಿಯವರೆಗೆ ರೈತರಿಗೆ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಇದರಿಂದಾಗಿ, ಅವರು ತೀವ್ರ ಸಂಕಷ್ಟದಲ್ಲಿದ್ದಾರೆ‘ ಎಂದರು.

‘ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಯನ್ನು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವಾಲಯ ಹಾಗೂ ಪ್ರಧಾನಿ ಸಚಿವಾಲಯವು ಆದಷ್ಟು ಬೇಗ ಪರಿಹರಿಸಬೇಕು‘ ಎಙಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.