ಬೆಂಗಳೂರು: ಪದವಿ ಪೂರ್ವ ಕಾಲೇಜುಗಳೂ ಸೇರಿದಂತೆ ಎಲ್ಲ ಬಗೆಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲೂ 2026–27ನೇ ಸಾಲಿನಿಂದ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ಮಂಡಿಸಿದ ಬಜೆಟ್ನಲ್ಲೇ ಘೋಷಣೆ ಮಾಡಿದ್ದರು. ಚುನಾವಣೆಗಳನ್ನು ಮರು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮಿತಿಯನ್ನು ನೇಮಕ ಮಾಡಿದ್ದರು.

ಪ್ರಥಮ ಪಿಯುನಿಂದಲೇ ಚುನಾವಣೆ ಮೂಲಕ ವಿದ್ಯಾರ್ಥಿ ಸಂಘಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಸರ್ಕಾರದ ನಿರ್ಧಾರವನ್ನು ಖಚಿತಪಡಿಸಿದ ಸಮಿತಿಯ ಸಂಯೋಜಕರೂ ಆದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ‘ಈ ಕುರಿತು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆಗೆ ಚರ್ಚಿಸಲಾಗುತ್ತಿದ್ದು, ಬರುವ ಶೈಕ್ಷಣಿಕ ಸಾಲಿನಿಂದಲೇ ಚುನಾವಣೆಗಳನ್ನು ನಡೆಸಲಾಗುತ್ತದೆ’ ಎಂದರು.

‘ನಾಯಕತ್ವ ಗುಣಗಳು ಪಿಯು ಕಾಲೇಜು ಹಂತದಲ್ಲಿಯೇ ಬೆಳೆಯಬೇಕು. ಈ ವಿಷಯವನ್ನು ಸಮಿತಿ ಸಭೆಗಳಲ್ಲಿ ಚರ್ಚಿಸಿ, ಪಿಯು ಕಾಲೇಜುಗಳಲ್ಲಿಯೂ ಚುನಾವಣೆಯನ್ನು ಪರಿಗಣಿಸಲು ತೀರ್ಮಾನಿಸಲಾಗಿದೆ. ರಾಜಕೀಯ ಪಕ್ಷಗಳೊಂದಿಗೆ ನಿಕಟವರ್ತಿಗಳಾದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಪೋಷಕರ ಸಂಘಗಳ ಜತೆಗೂ ಸಮಾಲೋಚನೆ ನಡೆಸಲಾಗುವುದು. ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು’ ಎಂದು ಹೇಳಿದರು.

ಭಾರತದ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಲು ಲಿಂಗ್ಡೋ ಸಮಿತಿಯು ರೂಪಿಸಿದ ನಿಯಮಗಳು ಮತ್ತು ಮಾರ್ಗಸೂಚಿಗಳನ್ನೂ ಸಮಿತಿ ಪರಿಶೀಲಿಸುತ್ತಿದೆ. ಈ ವರದಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ವರದಿ ಆಧಾರದಲ್ಲೇ ಚುನಾವಣಾ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಪಾಟೀಲ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.