ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬಿಜೆಪಿಯ ಸುಭಾಷ್ ಗುತ್ತೇದಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಸುಭಾಷ್ ಗುತ್ತೇದಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶುಕ್ರವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

‘ಅರ್ಜಿದಾರರು ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ಇಷ್ಟೇ ಮೊತ್ತಕ್ಕೆ ಒಬ್ಬರ ಖಾತ್ರಿ ನೀಡಬೇಕು. ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ’ ಎಂಬುದೂ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.