ಸುಬ್ರಹ್ಮಣ್ಯ: ಜೂನ್ 21ರಂದು ಸೂರ್ಯಗ್ರಹಣದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ನಿತ್ಯದ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ.
ಆ ದಿನ ಬೆಳಿಗ್ಗೆ 6.30ರಿಂದ 10ರವರೆಗೆ ಮತ್ತು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಮಾತ್ರ ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ ಎಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.