ಬೆಂಗಳೂರು: ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು 2021 ರ ಡಿಸೆಂಬರ್ 31 ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ.

ಸುಮಾರು 25 ವರ್ಷಗಳಿಂದ ಇನ್ಫೊಸಿಸ್ ಪ್ರತಿಷ್ಠಾನದ ಮೂಲಕ ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. 2021 ಡಿಸೆಂಬರ್ 31ಕ್ಕೆ 25 ವರ್ಷಗಳು ಪೂರ್ಣಗೊಳ್ಳುವುದರಿಂದ ಅವರು ನಿವೃತ್ತಿ ಬಯಸಿದ್ದಾರೆ.

ಈ ಪ್ರತಿಷ್ಠಾನ 1996 ರಲ್ಲಿ ಸ್ಥಾಪನೆಯಾಗಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಕಲೆ– ಸಂಸ್ಕೃತಿ, ಮಧ್ಯಾಹ್ನದ ಬಿಸಿಯೂಟ ಮತ್ತು ಕುಡಿಯುವ ನೀರಿನ ಯೋಜನೆಗಳಲ್ಲಿ ಪ್ರತಿಷ್ಠಾನ ಕಾರ್ಯ ನಿರ್ವಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸುಧಾಮೂರ್ತಿ, ‘ಕಳೆದ 25 ವರ್ಷಗಳಲ್ಲಿ ಸೇವಾ ಕಾರ್ಯದ ಮೂಲಕ ದೇಶದ
ನೈಜ ಸ್ಥಿತಿ ಮತ್ತು ಜನಸಾಮಾನ್ಯರ ಅಗತ್ಯವನ್ನು ಅರಿತುಕೊಳ್ಳಲು ಸಾಧ್ಯವಾಯಿತು. ಈ ಕಾರ್ಯವನ್ನು ಒಂದು ತಂಡವಾಗಿ ನಿರ್ವಹಿಸಿದೆವು. ಪ್ರತಿಷ್ಠಾನದಿಂದ ನಿವೃತ್ತಿ ಹೊಂದಿದ ಬಳಿಕವೂ ಇಂತಹ ಸೇವಾ ಕಾರ್ಯಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

‘ಸುಧಾಮೂರ್ತಿ ಅವರ ಕಾರ್ಯವು ಭವಿಷ್ಯದ ಪೀಳಿಗೆಗೆ ಪ್ರೇರಣೆ ಆಗಲಿದೆ’ ಎಂದು ಇನ್ಫೊಸಿಸ್ ಸಿಎಸ್‌ಆರ್ ಸಮಿತಿಯ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

ಮೈಸೂರು ವಿ.ವಿಯಿಂದ ಗೌರವ ಡಾಕ್ಟರೇಟ್

ಮೈಸೂರು: ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.

ಅ.19 ರಂದು ನಡೆಯಲಿರುವ ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.