ಬೆಂಗಳೂರು: ‘ಸರ್ಕಾರ ಕಬ್ಬು ಬೆಳೆಗಾರರಿಗೆ ಘೋಷಿಸಿರುವ ಪ್ರೋತ್ಸಾಹಧನ ಪಾವತಿಸಲು ಏಳು ಖಾಸಗಿ ಸಕ್ಕರೆ ಕಾರ್ಖಾನೆಗಳು ನಿರಾಕರಿಸುತ್ತಿದ್ದು, ಈ ಕಾರ್ಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಸಚಿವ ಶಿವಾನಂದ ಪಾಟೀಲ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೂ ಈ ಮನವಿಯನ್ನು ನೀಡಿರುವ ದಿನೇಶ್, ‘ರೈತರಿಗೆ ಸೇರಬೇಕಾದ ಬಾಕಿ ಹಣವನ್ನು ಕೊಡಿಸದಿದ್ದರೆ ಮುಂಬರುವ ಹಂಗಾಮಿನಲ್ಲಿ ಈ ಕಾರ್ಖಾನೆಗಳ ಪರವಾನಗಿ ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘2025-26ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಗಳು ಸರ್ಕಾರದ ₹50 ಮತ್ತು ಕಾರ್ಖಾನೆಯ ₹50 ಸೇರಿಸಿ ಒಟ್ಟು ₹100 ನ್ನು ರೈತರಿಗೆ ತಲುಪಿಸಬೇಕಿದೆ. ಆದರೆ, ಕೊಳ್ಳೇಗಾಲ ತಾಲ್ಲೂಕಿನ ಕುಂತೂರಿನಲ್ಲಿರುವ ಬನ್ನಾರಿ ಅಮ್ಮನ್ ಶುಗರ್ಸ್, ಚನ್ನರಾಯಪಟ್ಟಣದ ಚಾಮುಂಡೇಶ್ವರಿ ಶುಗರ್ಸ್, ಕೆ.ಆರ್. ಪೇಟೆ ತಾಲ್ಲೂಕಿನಲ್ಲಿರುವ ಕೋರಮಂಡಲ ಶುಗರ್ಸ್, ಮದ್ದೂರು ತಾಲ್ಲೂಕಿನಲ್ಲಿರುವ ಚಾಮುಂಡೇಶ್ವರಿ ಶುಗರ್ಸ್, ಪಾಂಡವಪುರ ತಾಲ್ಲೂಕಿನಲ್ಲಿರುವ ಎಂಆರ್ಎನ್ ಕೇನ್ ಪವರ್ ಆ್ಯಂಡ್ ಬೈಯೋರಿಪೈನರಿಸ್ ಪ್ರೈ.ಲಿ, ಮದ್ದೂರು ತಾಲ್ಲೂಕಿನಲ್ಲಿರುವ ಎನ್ಎಸ್ಎಲ್ ಶುಗರ್ಸ್, ನಂಜನಗೂಡು ತಾಲ್ಲೂಕಿನಲ್ಲಿರುವ ಬನ್ನಾರಿ ಅಮ್ಮನ್ ಶುಗರ್ಸ್ ಈ ಕಾರ್ಖಾನೆಗಳು ತಮ್ಮ ಪಾಲಿನ ₹50 ಅನ್ನು ಕಬ್ಬು ರೈತರಿಗೆ ಪಾವತಿಸಲು ಹಿಂದೇಟು ಹಾಕುತ್ತಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಈ ಕಾರ್ಖಾನೆಗಳ ಮೇಲೆ ಜಿಲ್ಲಾಧಿಕಾರಿಗಳು ಒತ್ತಡ ಹೇರಿದರೂ, ಮಾಲೀಕರು ಸರ್ಕಾರದ ಆದೇಶಕ್ಕೆ ಬೆಲೆ ನೀಡುತ್ತಿಲ್ಲ. ಇಂಥ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದೂ ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1744830075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.