ನವದೆಹಲಿ: ಪ್ರಸ್ತುತ ಮಾರುಕಟ್ಟೆ ವರ್ಷದ ಮಾರ್ಚ್ 5ರವರೆಗೆ ದೇಶದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ₹15,504 ಕೋಟಿ ಬಾಕಿ ಉಳಿಸಿಕೊಂಡಿವೆ. ರಾಜ್ಯದಲ್ಲಿ ರೈತರಿಗೆ ₹3,365 ಕೋಟಿ ಪಾವತಿಗೆ ಬಾಕಿ ಇದೆ.

ರಾಜ್ಯಸಭೆಯಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಆಹಾರ ಹಾಗೂ ಗ್ರಾಹಕ ವ್ಯವಹಾರ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ಉತ್ತರ ಪ್ರದೇಶದ ಸಕ್ಕರೆ ಕಾರ್ಖಾನೆಗಳು ₹4,793 ಕೋಟಿ ಪಾವತಿ ಮಾಡಬೇಕಿದೆ. ಬಾಕಿ ಉಳಿಸಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ (₹2,949 ಕೋಟಿ) ಮತ್ತು ಗುಜರಾತ್ (₹1,454 ಕೋಟಿ) ನಂತರದ ಸ್ಥಾನಗಳಲ್ಲಿವೆ. ಕರ್ನಾಟಕದ ಸಕ್ಕರೆ ಕಾರ್ಖಾನೆಗಳು 2023-24ರ ಆರ್ಥಿಕ ವರ್ಷದವರೆಗೆ ರೈತರಿಗೆ ಎಲ್ಲ ಬಾಕಿಗಳನ್ನು ಪಾವತಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.