ಬೆಂಗಳೂರು: ಪ್ರತಿ ಟನ್ ಕಬ್ಬಿಗೆ ದಕ್ಷಿಣ ಕರ್ನಾಟಕ ಭಾಗದ ಕಾರ್ಖಾನೆಗಳು ನೀಡಬೇಕಿರುವ ಪ್ರೋತ್ಸಾಹ ಧನದ ಬಾಕಿ ₹50 ಅನ್ನು ಬೆಳೆಗಾರರ ಖಾತೆಗೆ ಜಮೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಕ್ಕರೆ ನಿರ್ದೇಶನಾಲ ಯದ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

‘ಈಗಾಗಲೇ ಏಳು ಸಕ್ಕರೆ ಕಾರ್ಖಾನೆ ಗಳು ರೈತರ ಖಾತೆಯ ವಿವರವನ್ನು ನೀಡಿವೆ. ಶೀಘ್ರದಲ್ಲೇ ರೈತರಿಗೆ ಪ್ರೋತ್ಸಾಹಧನ ಜಮೆಯಾಗಲಿದೆ. ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ’ ಎಂದು ದಿನೇಶ್ ತಿಳಿಸಿದ್ದಾರೆ.

2025-26ನೇ ಹಂಗಾಮಿನ ಕಬ್ಬು ಬೆಳೆಗಾರರ ಬಾಕಿ ಪ್ರೋತ್ಸಾಹಧನ ಪಾವತಿ, ರೈತರ ಬ್ಯಾಂಕ್ ಖಾತೆ ವಿವರಗಳನ್ನು ನೀಡಲು ನಿರಾಕರಿಸುತ್ತಿ ರುವ ಹಾಗೂ ಸರ್ಕಾರದ ಆದೇಶ ಉಲ್ಲಂಘಿಸುತ್ತಿರುವ ದಕ್ಷಿಣ ಕರ್ನಾಟಕದ ಏಳು ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದಿನೇಶ್ ಗೂಳಿಗೌಡ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ರೈತರಿಗೆ ಬಾಕಿ ನೀಡದ, ನಿಯಮ ಪಾಲಿಸದ ಕಾರ್ಖಾನೆಗಳ ಕಬ್ಬು ಅರೆಯುವಿಕೆ ಪರವಾನಗಿಯನ್ನು ಮುಂಬರುವ ಹಂಗಾಮಿಗೆ ನವೀಕರಿಸಬಾರದು. ಹೈಕೋರ್ಟ್ನಲ್ಲಿ ರುವ ತಡೆಯಾಜ್ಞೆ ತೆರವುಗೊಳಿಸಲು ಅಡ್ವೊಕೇಟ್ ಜನರಲ್ ಮೂಲಕ ಪ್ರಬಲ ವಾದ ಮಂಡಿಸಬೇಕು. ಮುಂಗಾರು ಹಂಗಾಮು ಆರಂಭವಾಗುವ ಮುನ್ನ ಕಾರ್ಖಾನೆ ಮಾಲೀಕರ ಸಭೆ ಕರೆದು, ಕಾರ್ಖಾನೆಗಳನ್ನು ಸರ್ಕಾರದ ವಶಕ್ಕೆ ಪಡೆಯುವ ಎಚ್ಚರಿಕೆ ನೀಡಬೇಕು ಎಂದು ಮನವಿ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-31910510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.