ಬೆಂಗಳೂರು: ‘ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತಿತರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ರೈತರ ಸಂಕಷ್ಟದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದ್ದರಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಮಂಗಳವಾರ ಭಾಗವಹಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಪ್ರತಿ ಟನ್ಗೆ ₹3,500 ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸಿಲ್ಲ ಎಂದು ದೂರಿದರು.

‘ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕಗಳಲ್ಲಿ ಆಗಿರುವ ಅತಿವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆ ಭಾಗದಲ್ಲಿ ನಾವೂ ಪ್ರವಾಸ ಮಾಡಿದ್ದೇವೆ. ಜಿಲ್ಲಾ ಉಸ್ತುವಾರಿಗಳು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರದ ಗಮನವನ್ನೂ ಸೆಳೆದಿದ್ದೇವೆ. ಇಲಾಖಾ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ಸಚಿವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದು ಆರೋಪಿಸುತ್ತಾ ಕುಳಿತಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ’ ಎಂದು ಆಪಾದಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿಲ್ಲವೆಂದು ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಷಯ ಬಗ್ಗೆಯೂ ರಾಜ್ಯ ಸರ್ಕಾರ ಗಮನ ಹರಿಸುತ್ತಿಲ್ಲ. ಒಟ್ಟಾರೆ ನಾಡಿನ ರೈತರ ಸಮಸ್ಯೆಗಳ ಬಗ್ಗೆ ಚಕಾರ ಎತ್ತದೇ ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ’ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಗ್ರಾಮಗಳ ಸ್ಥಿತಿಗತಿಯ ಬಗ್ಗೆ ಮಾತನಾಡದೇ ಜಗತ್ತು, ದೇಶ, ಸಂಘ ಪರಿವಾರದ ಬಗ್ಗೆ ಹೇಳಿಕೆ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

‘ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಮರೆತ ಸರ್ಕಾರ’

‘ಕುರ್ಚಿ ಕಿತ್ತಾಟದಲ್ಲಿ ಸರ್ಕಾರ ರೈತರನ್ನು ಸಂಪೂರ್ಣವಾಗಿ ಮರೆತಿದೆ. ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.

‘ಒಂದು ಕಡೆ ಹೆಸರು ಸೂರ್ಯಕಾಂತಿ ಉದ್ದಿನಕಾಳು ಸೋಯಾಬಿನ್ ಬೆಳೆದ ರೈತರು ತಮ್ಮ ಫಸಲು ಮಾರಲಾಗದೆ ಸಂಕಷ್ಟದಲ್ಲಿದ್ದರೆ ಮತ್ತೊಂದು ಕಡೆ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕುರ್ಚಿ ಅಲುಗಾಡುತ್ತಿರುವುದರಿಂದ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ತಾಳ್ಮೆಗೆಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ರೈತರು ತಮ್ಮ ಸಂಕಷ್ಟವನ್ನು ಯಾರ ಬಳಿ ಹೇಳಿಕೊಳ್ಳಬೇಕು? ರೈತ ವಿರೋಧಿ ಸರ್ಕಾರ ಇದ್ದರೆಷ್ಟು ಹೋದರೆಷ್ಟು’ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.