ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ನಡೆಸಿದ ಸುದೀರ್ಘ ಮಾತುಕತೆಯ ನಂತರ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿನ ಪರಿಷ್ಕೃತ ಬೆಲೆಯನ್ನು ₹3,300ಕ್ಕೆ ನಿಗದಿ ಮಾಡಿದೆ.

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಕಾರ್ಖಾನೆಗಳು ₹3,250 ಹಾಗೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹50 ಪಾವತಿಸಲು ಸಮ್ಮತಿಸಿವೆ. 11.25 ರಿಕವರಿ ಇರುವ ಪ್ರತಿ ಟನ್ ಕಬ್ಬಿಗೆ ಈ ದರ ಸಿಗಲಿದೆ.
.ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ: ಬೆಳೆಗಾರರ ಹೋರಾಟಕ್ಕೆ ಬೆಂಬಲ.
ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ಸಿದ್ದರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರನ್ನು ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಕಬ್ಬು ಬೆಳೆಗಾರರ ಸಮಸ್ಯೆ, ಕಬ್ಬಿನ ಖರೀದಿ ದರ ಹೆಚ್ಚಳ ಕುರಿತು ರೈತ ಮುಖಂಡರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಕ್ಕರೆಗೆ ಎಂಎಸ್ಪಿ, ಕಬ್ಬಿಗೆ ಎಫ್ಆರ್ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ, ಸಕ್ಕರೆ ರಫ್ತು ಮಿತಿ ನಿಗದಿಪಡಿಸುವುದೂ ಕೇಂದ್ರ ಸರ್ಕಾರ. ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದರು.
.ಕಬ್ಬು ಬೆಳೆಗಾರರ ಸಮಸ್ಯೆ | ಕೇಂದ್ರ ಸರ್ಕಾರವನ್ನು ಭೇಟಿ ಮಾಡೋಣ: ಸಿಎಂಗೆ ಸೋಮಣ್ಣ.
ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರ ಎಲ್ಲ ಅಹವಾಲುಗಳನ್ನೂ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಫ್ಆರ್ಪಿ ದರ ನಿಗದಿ ಮಾಡುವಾಗ ಕೇಂದ್ರ ಸರ್ಕಾರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ. ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿಗೆ ಮನವಿ ಮಾಡಿದರು.
.ಕಬ್ಬಿನ ಇಳುವರಿ ಆಧಾರದಲ್ಲಿ ಟನ್ಗೆ ₹5,500 ನೀಡಿ: ಕಬ್ಬು ಬೆಳೆಗಾರರ ಸಂಘ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.