ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಗೌರವದೊಂದಿಗೆ ಸೂಲಗಿತ್ತಿ ನರಸಮ್ಮ ಅಂತ್ಯಕ್ರಿಯೆ

Last Updated 26 ಡಿಸೆಂಬರ್ 2018, 16:42 IST
ಅಕ್ಷರ ಗಾತ್ರ

ತುಮಕೂರು: ನಗರದ ಹೊರವಲಯ ಗಂಗಸಂದ್ರದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸ್ಮಶಾನದಲ್ಲಿ ಬುಧವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ ಅವರ ಅಂತಿಮ ಸಂಸ್ಕಾರ ನಡೆಯಿತು.

ಬೆಳಿಗ್ಗೆ 10ರಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಚಿವರಾದ ಎಸ್.ಆರ್.ಶ್ರೀನಿವಾಸ್, ಯು.ಟಿ.ಖಾದರ್, ಆರ್.ಬಿ.ತಿಮ್ಮಾಪುರ, ವೆಂಕಟರಮಣಪ್ಪ, ಸಂಸದರಾದ ಎಸ್‌.ಪಿ.ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ ಹಾಗೂ ವಿವಿಧ ಜನಪ್ರತಿನಿಧಿಗಳು ದರ್ಶನ ಪಡೆದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿಟ್ಟು ಸರ್ಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT