ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಅಂಗಾರ ಅಸ್ವಸ್ಥ: ಕೆಎಂಸಿ ಆಸ್ಪತ್ರೆಗೆ ದಾಖಲು

Last Updated 27 ಮಾರ್ಚ್ 2020, 10:08 IST
ಅಕ್ಷರ ಗಾತ್ರ

ಮಂಗಳೂರು: ರಕ್ತದೊತ್ತಡ ಕಡಿಮೆ ಆಗಿದ್ದರಿಂದ ದಿಢೀರ್ ಅಸ್ವಸ್ಥಗೊಂಡ ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಕಡಬದಲ್ಲಕ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ಅವರು ಅಸ್ವಸ್ಥಗೊಂಡಿದ್ದರು.

ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ‌. ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಗಿದೆ.

ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT