ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿರುವ ಎ.ಸುಮಲತಾ ಅವರ ‘ಸ್ವಾಭಿಮಾನಿ ವಿಜಯೋತ್ಸವ’ ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಬುಧವಾರ (ಮೇ 29) ನಡೆಯಲಿದೆ.

ಅಂಬರೀಷ್ ಜನ್ಮದಿನದಂದೇ ವಿಜಯೋತ್ಸವ ನಡೆಯುತ್ತಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಷ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ, ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನೂ ಆಯೋಜಿಸಲಾಗಿದೆ.

ನಟರಾದ ಯಶ್, ದರ್ಶನ್, ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಅಂಬರೀಷ್ ಪುತ್ರ ಅಭಿಷೇಕ್ ಗೌಡ ಭಾಗವಹಿಸಲಿದ್ದಾರೆ. ‘ಸ್ನೇಹಶೀಲ‘ ಹಾಗೂ ‘ಅಂಬರೀಷ್; ವ್ಯಕ್ತಿ– ವ್ಯಕ್ತಿತ್ವ ವರ್ಣರಂಜಿತ ಬದುಕು‘ ಪುಸ್ತಕಗಳು ಬಿಡುಗಡೆಯಾಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.