ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Summer Rains In Karnataka | ರಾಜ್ಯದ 21 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

Published 21 ಏಪ್ರಿಲ್ 2024, 0:02 IST
Last Updated 21 ಏಪ್ರಿಲ್ 2024, 0:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಭಾನುವಾರವೂ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 21 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಬಾಗಲಕೋಟೆ ಹಾಗೂ ಬೀದರ್ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಉಡುಪಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಸ್ಥಳದಲ್ಲಿ 30–40 ಕಿ.ಮೀ. ವೇಗದಲ್ಲಿ, ಉತ್ತರ ಒಳನಾಡಿನಲ್ಲಿ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದೇ 24ರವರೆಗೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. 

ಶನಿವಾರ ಬೆಳಿಗ್ಗೆ 8 ಗಂಟೆಗೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಹಲವು ಕಡೆ, ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗರಿಷ್ಠ (13 ಸೆಂ.ಮೀ.) ಮಳೆಯಾಗಿದೆ. ಉತ್ತರ ಕನ್ನಡದ ಗೋಕರ್ಣ (10 ಸೆಂ.ಮೀ.), ಮಂಕಿ (8 ಸೆಂ.ಮೀ.), ಚಿಕ್ಕಮಗಳೂರಿನ ಕೊಪ್ಪ (7 ಸೆಂ.ಮೀ.), ಕಮ್ಮರಡಿಯಲ್ಲಿ (7 ಸೆಂ.ಮೀ.) ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT