ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು–ಗದಗ ವೋಲ್ವೊ ಬಸ್‌ ಸೇವೆ ಪುನಾರಂಭಿಸಿ: ಸಿಎಂಗೆ ಸುನೀಲ್‌ ಜೋಶಿ ಮನವಿ

Published 20 ಆಗಸ್ಟ್ 2024, 7:49 IST
Last Updated 20 ಆಗಸ್ಟ್ 2024, 7:49 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಿಂದ ಗದಗಕ್ಕೆ ವೋಲ್ವೊ ಬಸ್‌ ಸೇವೆ ಪುನಾರಂಭ ಮಾಡುವಂತೆ ಮಾಜಿ ಕ್ರಿಕೆಟಿಗ ಸುನೀಲ್‌ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಬೆಂಗಳೂರಿನಿಂದ ಗದಗಕ್ಕೆ ಹೋಗುವ ವೋಲ್ವೊ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಇದಕ್ಕೆ ಯಾವುದೇ ವಿವರ ನೀಡಲಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ತಕ್ಷಣ ಚರ್ಚೆ ನಡೆಬೇಕು ಎಂದು ನಾನು ವಿನಂತಿಸುತ್ತೇನೆ. ನಿಮ್ಮ ಸಹಕಾರ ತುಂಬಾ ಮುಖ್ಯ' ಎಂದು ಪೋಸ್ಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ ಪಾಟೀಲ ಅವರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಈ ಹಿಂದೆ ಸುನೀಲ್ ಜೋಶಿ ಅವರ ಮನವಿಯ ಮೇರೆಗೆ ಸಾರಿಗೆ ಇಲಾಖೆ ಗದಗದಿಂದ ಬೆಂಗಳೂರಿಗೆ ವೋಲ್ವೊ ಬಸ್ ಸೇವೆಯನ್ನು ಆರಂಭಿಸಿತ್ತು.

2023ರಲ್ಲಿ ಸುನೀಲ್‌ ಜೋಶಿ, ವೋಲ್ಟೊ ಬಸ್​ ಸೇವೆ ಒದಗಿಸುವಂತೆ ಸರ್ಕಾರಕ್ಕೆ ಎಕ್ಸ್‌ನಲ್ಲಿ ‌ಪೋಸ್ಟ್‌ ಮಾಡಿದ್ದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (2003) ಅವರಿಗೆ ನನ್ನದೊಂದು ಮನವಿ. ಬೆಂಗಳೂರಿನಿಂದ ಗದಗಕ್ಕೆ ವೋಲ್ವೊ ಬಸ್‌ನ ಅಗತ್ಯವಿದೆ. ಇದಕ್ಕಾಗಿ ನಾವು 25 ವರ್ಷಗಳಿಂದ ಕಾಯುತ್ತಿದ್ದೇವೆ. ಗದಗಕ್ಕೆ ಐರಾವತ ಬಸ್‌ ಸೇವೆ ನೀಡಲು ಇದು ಸಕಾಲ’ ಎಂದು ಅವರು ಪೋಸ್ಟ್‌ ಮಾಡಿದ್ದರು.

ಅವರ ಮನವಿಗೆ ಸ್ಪಂದಿಸಿದ್ದ ಅಂದಿನ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬಸ್ ಸೇವೆ ಕಲ್ಪಿಸಿದ್ದರು. ಆದರೆ ಕೆಲ ತಿಂಗಳ ನಂತರ ಸಾರಿಗೆ ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಅವರು ಬಸ್ ಸೇವೆ ಪುನಾರಂಭ ಮಾಡುವಂತೆ ಮತ್ತೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT