ಬೆಂಗಳೂರು: ‘ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ಶೇಕಡಾ 0.48 ರಷ್ಟು ಆಕರಣೆ ಮಾಡಬೇಕೆಂಬ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತದ (ಕ್ಯಾಂಪ್ಕೊ) ಬೇಡಿಕೆಯನ್ನು ಪರಿಗಣಿಸಲಾಗುವುದು’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ಕೃಷಿ ಮಾರಾಟ ಇಲಾಖೆ ಕಚೇರಿಯಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ಕುಮಾರ್ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ‘ಅಧಿಕಾರಿಗಳ ಜೊತೆ ಚರ್ಚಿಸಿ ಶುಲ್ಕವನ್ನು ಈ ಮೊದಲಿನಂತೆ ಆಕರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕ್ಯಾಂಪ್ಕೊದ ಚಟುವಟಿಕೆ, ವಾರ್ಷಿಕ ವಹಿವಾಟು ಹಾಗೂ ಯಾವೆಲ್ಲ ರಾಜ್ಯಗಳ ಕಾರ್ಯವ್ಯಾಪ್ತಿ ಹೊಂದಿದೆ ಎಂಬ ವಿವರ ಪಡೆದ ಸಚಿವರು, ಬಹುರಾಜ್ಯ ಸಹಕಾರ ಸಂಘಗಳ ಕಾಯ್ದೆಯಡಿ ಬದಲಾವಣೆ ಆಗಿರುವುದರ ಕುರಿತು ಮಾಹಿತಿ ಪಡೆದರು. ಬಹುರಾಜ್ಯ ಸಹಕಾರ ಸಂಘಗಳ ಕಾಯ್ದೆಯಡಿ ಬರುವ ಕಾರಣ ಮೇ ತಿಂಗಳಲ್ಲಿ ಮಾರುಕಟ್ಟೆ ಶುಲ್ಕವನ್ನು ಶೇಕಡಾ 0.48 ರಿಂದ 0.60ಕ್ಕೆ ಹೆಚ್ಚಿಸಲಾಗಿತ್ತು.

‘ರಾಜ್ಯ ಸಹಕಾರ ಸಂಘಗಳ ಕಾಯ್ದೆಯಡಿ ಕ್ಯಾಂಪ್ಕೊ ಆರಂಭವಾಗಿದ್ದು, ಕ್ರಮೇಣ ಕೇರಳ ಸೇರಿದಂತೆ ಇತರ ರಾಜ್ಯಗಳಿಗೂ ವಾಣಿಜ್ಯ ಚಟುವಟಿಕೆ ವಿಸ್ತರಿಸಿದೆ. ಬಹುರಾಜ್ಯಗಳಲ್ಲಿ ಮಾರಾಟ ಘಟಕ ತೆರೆದು ರಾಷ್ಟ್ರವ್ಯಾಪಿ ವಾಣಿಜ್ಯ ಚಟುವಟಿಕೆ ಹೊಂದಿದ್ದರೂ ಮಂಗಳೂರಿನಲ್ಲಿಯೇ ನೋಂದಾಯಿತ ಕೇಂದ್ರ ಕಚೇರಿಯಿದೆ. ಎಪಿಎಂಸಿಗೆ ವಾರ್ಷಿಕ ಸುಮಾರು ₹ 9 ಕೋಟಿ ಮಾರುಕಟ್ಟೆ ಶುಲ್ಕ ಪಾವತಿ ಮಾಡುತ್ತಿದೆ’ ಎಂದು ಕಿಶೋರ್ಕುಮಾರ್ ವಿವರಿಸಿದರು.

‘ರಾಜ್ಯ ಸರ್ಕಾರ 2002, 2004 ಮತ್ತು 2009ರಲ್ಲಿ ಜಾರಿಗೊಳಿಸಿದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಗೆ ಕ್ಯಾಂಪ್ಕೊವನ್ನು ನೋಡಲ್ ಏಜನ್ಸಿಯಾಗಿ ನೇಮಿಸಲಾಗಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಸಂಸ್ಥೆ 1,48,381 ಸದಸ್ಯರನ್ನು ಹೊಂದಿದ್ದು, ಆ ಪೈಕಿ, ಶೇ 85ರಷ್ಟು ಕರ್ನಾಟಕದವರು. ರಾಜ್ಯದಲ್ಲಿ ಒಟ್ಟು 66 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚಿನ ಶಾಖೆಗಳು ಮತ್ತು ಖರೀದಿ ಕೇಂದ್ರಗಳು ಎಪಿಎಂಸಿ ಪ್ರಾಂಗಣ ಅಥವಾ ಸಮಿತಿ ಅಧಿಸೂಚಿತ ವಲಯದಲ್ಲೇ ಕಾರ್ಯನಿರ್ವಹಿಸುತ್ತಿವೆ. ನಿಯಮಗಳ ಪ್ರಕಾರ ರಾಜ್ಯ ಸರ್ಕಾರಕ್ಕೆ ಕಾಲಕಾಲಕ್ಕೆ ನಿಗದಿತ ಮಾರುಕಟ್ಟೆ ಶುಲ್ಕವನ್ನು ಪಾವತಿ ಮಾಡುತ್ತಿವೆ’ ಎಂದೂ ತಿಳಿಸಿದರು.

ಕುಂದಾಪುರ ಶಾಸಕ ಎ. ಕಿರಣ್ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ, ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.