ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸಲು ಪ್ರತಿಭಟನೆ ನಡೆಸುತ್ತಿರುವ 10 ಮಹಾನಗರ ಪಾಲಿಕೆಗಳ ನೌಕರರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಪರಿಷತ್ತು ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 10 ಮಹಾನಗರ ಪಾಲಿಕೆಗಳ ನೌಕರರು ಜುಲೈ 8ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಮಟ್ಟದ ಪ್ರತಿಭಟನೆ ನಡೆದಿತ್ತು. ಮುಖ್ಯ ಆಯುಕ್ತರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರಿಂದ ಬಿಬಿಎಂಪಿ ನೌಕರರು ಪ್ರತಿಭಟನೆ ನಿಲ್ಲಿಸಿದ್ದರು. ನಗರಾಭಿವೃದ್ಧಿ ಸಚಿವರು ಹಾಗೂ ಕಾರ್ಯದರ್ಶಿಯವರು ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು 10 ಮಹಾನಗರ ಪಾಲಿಕೆ ನೌಕರರು ಆಯಾ ಪಾಲಿಕೆಗಳ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

‘ಸರ್ಕಾರ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆ ತೋರಬೇಕು. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಯವರು ತುರ್ತು ಗಮನಹರಿಸಬೇಕು. ಪಾಲಿಕೆಗಳ ನಿತ್ಯದ ಯಾವ ಕೆಲಸ ಕಾರ್ಯಗಳು ನಿಲ್ಲಬಾರದು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸ್ಥಳೀಯ ಆಡಳಿತದ ದೃಷ್ಟಿಯಿಂದ ಪಾಲಿಕೆಗಳು ಮಹತ್ವ ಹೊಂದಿವೆ ಎಂಬುದನ್ನು ಆಡಳಿತಗಾರರು ಮರೆಯಬಾರದು’ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದ್ದಾರೆ.

‘ರಾಜ್ಯದ 10 ಮಹಾನಗರ ಪಾಲಿಕೆಗಳ 25 ಸಾವಿರಕ್ಕೂ ಹೆಚ್ಚು ನೌಕರರು ಮೂರು ದಿನಗಳಿಂದ ಮುಷ್ಕರ ನಡೆಸುತ್ತಿದ್ದರೂ, ಅವರ ಸಮಸ್ಯೆಗಳಿಗೆ ಕಿವಿಗೊಡದೆ ಉದ್ಧಟತನ ಪ್ರದರ್ಶನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತನ್ನ ಜನವಿರೋಧಿ ಧೋರಣೆ ಪ್ರದರ್ಶಿಸುತ್ತಿದ್ದಾರೆ’ ಎಂದು ಆರ್. ಅಶೋಕ ದೂರಿದ್ದಾರೆ.

ನೌಕರರು ಪ್ರತಿಭಟನೆ ನಡೆಸುತ್ತಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಆವರಣಕ್ಕೆ ಗುರುವಾರ ಭೇಟಿ ನೀಡಿದ್ದ ಕೆ.ಎಸ್. ಈಶ್ವರಪ್ಪ ಅವರು, ‘ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯ, ಸವಲತ್ತುಗಳು ಪಾಲಿಕೆ ನೌಕರರಿಗೆ ಸಿಗಬೇಕು. ಮೂರು ದಿನಗಳಿಂದ ಪಾಲಿಕೆಯ ಎಲ್ಲ ಕಾರ್ಯಗಳು ನಿಂತಿರುವುದರಿಂದ ನಾಗರಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ನೌಕರರ ಬೇಡಿಕೆಯನ್ನು ನಗರಾಭಿವೃದ್ಧಿ ಇಲಾಖೆ ಸಚಿವರು, ಕಾರ್ಯದರ್ಶಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ. ನಗರಾಭಿವೃದ್ಧಿ ಸಚಿವರಿಗೆ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.