ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ.