ರೇಣುಕಸ್ವಾಮಿ ಅವರನ್ನು ಕೊಲೆ ಮಾಡಿ ಮೋರಿಯಲ್ಲಿ ಎಸೆಯಲಾಗಿತ್ತು. ಆರೋಪಿಗಳು ಎರಡು ಕಾರುಗಳಲ್ಲಿ ಓಡಾಡಿದ ಬಗ್ಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ. ರೇಣುಕಸ್ವಾಮಿ ಮೇಲೆ ದರ್ಶನ್ ತೀವ್ರ ಹಲ್ಲೆ ನಡೆಸಿದ್ದರು. ಇಬ್ಬರು ಪ್ರತ್ಯಕ್ಷದರ್ಶಿ ಸಾಕ್ಷಿಗಳಿದ್ದಾರೆ. ಆರೋಪಿಗಳ ವಿರುದ್ಧ ಪ್ರಬಲ ಪುರಾವೆಗಳು ಇವೆ. ಜಾಮೀನು ಪಡೆದ ಬಳಿಕ ದರ್ಶನ್ ಪ್ರಕರಣದ ಸಾಕ್ಷಿಗಳ ಜತೆಗೆ ಓಡಾಡಿದ್ದಾರೆ. ಅವರ ಜಾಮೀನು ರದ್ದುಗೊಳಿಸಬೇಕು.
ಸಿದ್ಧಾರ್ಥ ಲೂತ್ರಾ, ರಾಜ್ಯ ಸರ್ಕಾರದ ವಕೀಲ
ಪ್ರಕರಣದ ತನಿಖೆಯೇ ದೋಷಪೂರಿತವಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ ವಿರೋಧಾಭಾಸದಿಂದ ಕೂಡಿದೆ ಎಂಬುದನ್ನು ಹೈಕೋರ್ಟ್ ಗಮನಿಸಿದೆ. ಒಬ್ಬ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಘಟನೆ ನಡೆದ 12 ದಿನಗಳ ಬಳಿಕವಷ್ಟೇ ದಾಖಲಿಸಲಾಗಿದೆ. ಅವರ ಹೇಳಿಕೆಗಳನ್ನು ವಿಳಂಬವಾಗಿ ದಾಖಲಿಸಿದ್ದರಿಂದ ಅವುಗಳನ್ನು ನಂಬುವಂತಿಲ್ಲ. ಅವರ ಸಾಕ್ಷ್ಯಗಳನ್ನು ಬೆಂಬಲಿಸಲು ಆರೋಪಪಟ್ಟಿಯಲ್ಲಿ ಯಾವುದೇ ಪುರಾವೆಗಳಿಲ್ಲ. ಇದಲ್ಲದೇ, ಪ್ರಕರಣದಲ್ಲಿ 272 ಸಾಕ್ಷಿಗಳಿದ್ದು, ವಿಚಾರಣೆ ಇನ್ನೂ ಆರಂಭವಾಗಿಲ್ಲ.