ನವದೆಹಲಿ: ಕಾವೇರಿ ಕಣಿವೆಯ ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡು ಕೈಗೆತ್ತಿಕೊಂಡಿರುವ ‘ಕಾವೇರಿ– ವೆಲ್ಲಾರ್–ಗುಂಡಾರ್’ ನದಿ ಜೋಡಣೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿರುವ ಮಧ್ಯಂತರ ಪರಿಹಾರ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

‘ಕೇಂದ್ರ ಸರ್ಕಾರವು ಈ ಯೋಜನೆಗೆ ಇನ್ನೂ ಅನುಮತಿ ನೀಡಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಪರಿಗಣಿಸುತ್ತಿಲ್ಲ’ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.

ಯೋಜನೆಯ ಕಾಮಗಾರಿಗೆ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಅರ್ಜಿ ಸಲ್ಲಿಸಿತ್ತು. ‘ಈ ಯೋಜನೆಯು ಕಾವೇರಿ ನ್ಯಾಯಮಂಡಳಿ ತೀರ್ಪಿನ ಸ್ಪಷ್ಟ ಉಲ್ಲಂಘನೆ’ ಎಂದು ರಾಜ್ಯದ ವಕೀಲರು ದೂರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.