ನವದೆಹಲಿ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅಕ್ರಮ ಗಣಿ ಗುತ್ತಿಗೆ ನೀಡಿಕೆ ಪ್ರಕರಣದಲ್ಲಿ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದು ಮಾಡಬೇಕು ಎಂದು ಕೋರಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ಸಂಡೂರಿನ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ 2014ರಲ್ಲಿ ಅಕ್ರಮವಾಗಿ 550 ಎಕರೆ ಗಣಿ ಗುತ್ತಿಗೆ ನೀಡಲಾಗಿದೆ ಎಂಬ ಪ್ರಕರಣ ಕುಮಾರಸ್ವಾಮಿ ವಿರುದ್ಧ 2024ರಲ್ಲಿ ದಾಖಲಾಗಿತ್ತು.

ಲೋಕಾಯುಕ್ತ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಕಾರಣಕ್ಕೆ ಈ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಕೋರಿ ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಅಮಾನತ್ತಿನಲ್ಲಿ ಇರಿಸಿ ಆದೇಶ ಹೊರಡಿಸಬೇಕು ಎಂದು ಕೋರಿ ಕುಮಾರಸ್ವಾಮಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರ ಮನವಿ ಪರಿಗಣಿಸಬಾರದು ಎಂದು ಹೈಕೋರ್ಟ್ ನ್ಯಾಯಪೀಠವು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೇ 8ರಂದು ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಲೋಕಾಯುಕ್ತದ ಪರವಾಗಿ ವಕೀಲ ವಿಕ್ರಮ್ ಹೆಗ್ಡೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಲೋಕಾಯುಕ್ತದ ಅರ್ಜಿಯನ್ನು ಪರಿಗಣಿಸಲು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠ ನಿರಾಕರಿಸಿತು.

ಪ್ರಕರಣವೇನು: ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದ ಅಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

‘ಗಣಿಗಾರಿಕೆ ಪ್ರಕರಣದಲ್ಲಿ ಎಸ್ಐಟಿ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದೇನೆ. ಕುಮಾರಸ್ವಾಮಿ ವಿರುದ್ಧ ದಾಖಲಾದ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದವು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರಲ್ಲಿ ಅನುಮತಿ ಕೋರಿದ್ದೆ. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ, ನನ್ನ ಬಗ್ಗೆ ಸುಳ್ಳು ಹಾಗೂ ದುರುದ್ದೇಶದ ಆರೋಪ ಮಾಡಿ ಬೆದರಿಕೆ ಒಡ್ಡಿದ್ದರು’ ಎಂದು ಚಂದ್ರಶೇಖರ್ ನೀಡಿರುವ ದೂರು ನೀಡಿದ್ದರು.

‘ನಿಖಿಲ್ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಹೇಳಿಕೆ ಕೊಟ್ಟಿದ್ದರು. ಸುರೇಶ್ ಬಾಬು ಅವರು ನನ್ನ ವಿರುದ್ದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು’ ಎಂದು ಉಲ್ಲೇಖಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.