ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿ ಪೂಜೆ ನಡೆಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

‘ಕರ್ನಾಟಕ ಹೈಕೋರ್ಟ್ನಲ್ಲಿ ಈ ವಿಷಯ ಇತ್ಯರ್ಥ ಆಗಿಲ್ಲ. ಇಂತಹ ಸಂದರ್ಭದಲ್ಲಿ ಸಂವಿಧಾನದ 32ನೇ ವಿಧಿಯನ್ನು ಅರ್ಜಿದಾರರಾದ ಖಲೀಲ್ ಅನ್ಸಾರಿ ಅವರಿಗೆ ಅನ್ವಯಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ಸ್ಪಷ್ಟಪಡಿಸಿತು.

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ವಿಭಾ ದತ್ತ ಮಖಿಜಾ, ‘ಈ ಪ್ರಕರಣದಲ್ಲಿ ಹೈಕೋರ್ಟ್ ಈಗಾಗಲೇ ಆದೇಶ ನೀಡಿದೆ’ ಎಂದು ವಾದಿಸಿದರು.

ಅಂತಿಮವಾಗಿ ಪೀಠವು ಮಧ್ಯಪ್ರವೇಶಿಸಲು ನಿರಾಕರಿಸಿತು ಮತ್ತು ಅರ್ಜಿ ವಜಾಗೊಳಿಸಿತು.

ಈ ವಿವಾದಿತ ಸ್ಥಳ 14ನೇ ಶತಮಾನದ ಸಂತ ಹಜರತ್ ಶೇಖ್ ಅಲ್ಲಾವುದ್ದೀನ್ ಅನ್ಸಾರಿ (ಲಾಡ್ಲೆ ಮಶಾಕ್) ಹಾಗೂ 15ನೇ ಶತಮಾನದ ಹಿಂದೂ ಸಂತ ರಾಘವ ಚೈತನ್ಯರ ಸಮಾಧಿಗಳಿಗೆ ಸಂಬಂಧಿಸಿದ್ದಾಗಿದೆ. ಕೆಲವರು ಶಿವಲಿಂಗ ಪೂಜೆಗೆ ನ್ಯಾಯಾಲಯಗಳಿಂದ ಮಧ್ಯಂತರ ಆದೇಶಗಳನ್ನು ಪಡೆಯುವ ಮೂಲಕ ಉದ್ದೇಶಿತ ಧಾರ್ಮಿಕ ಸ್ಥಳದ ಸ್ವರೂಪ ಬದಲಿಸಲು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು.

ಶಿವರಾತ್ರಿ ಸಂದರ್ಭದಲ್ಲಿ ಪ್ರತಿ ವರ್ಷವೂ ಪೂಜೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸುವ ಮೂಲಕ ತಾತ್ಕಾಲಿಕ ಪ್ರವೇಶವನ್ನು ಸ್ಥಿರ ಧಾರ್ಮಿಕ ಆಚರಣೆಯಾಗಿ ಬಿಂಬಿಸಲು ಯತ್ನಿಸಲಾಗುತ್ತಿದೆ ಎಂದೂ ಅರ್ಜಿಯಲ್ಲಿ ವಾದಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.