ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಬುಧವಾರ ನೋಟಿಸ್ ನೀಡಿದೆ.
೫ ಲಕ್ಷ ಲಂಚ ಪ್ರಕರಣದಲ್ಲಿ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಂಜುನಾಥ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿತು.