ನವದೆಹಲಿ: ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮೇಲ್ಮನವಿ ಸಂಬಂಧ ಸಿಬಿಐಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಕುಲಕರ್ಣಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಎನ್.ಕೊಟೀಶ್ವರ್ ಸಿಂಗ್ ಅವರ ಪೀಠವು, ಒಂದು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿತು.

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ವಿನಯ ಕುಲಕರ್ಣಿ ಅವರು 2025ರ ಜೂನ್ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 2025ರ ಡಿಸೆಂಬರ್ 8ರಂದು ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. 2026ರ ಜನವರಿ 27ರಂದು ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.