ನವದೆಹಲಿ: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆ ದಂಧೆಯಲ್ಲಿ ಭಾಗಿಯಾದ ಪ್ರಕರಣದಲ್ಲಿ ಆರೋಪಿಯಾಗಿರುವ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ.ಜೋಶಿ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ನೀಡಿದೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಶ್ರೀನಾಥ್ ಎಂ.ಜೋಶಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿನೋದ್ ಚಂದ್ರನ್ ಪೀಠವು, ಮೇ 4ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದಿಗೆ ನಿರ್ದೇಶನ ನೀಡಿತು.

ಲೋಕಾಯುಕ್ತ ಪರ ವಕೀಲರು, ‘ಈ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೆಬಲ್ ಸೇವೆಯಿಂದ ವಜಾಗೊಂಡಿರುವ ಮೊದಲ ಆರೋಪಿ ನಿಂಗಪ್ಪ ಸಾವಂತ್ ಜೊತೆ ಶ್ರೀನಾಥ್ ಜೋಶಿ ನಿರಂತರ ಸಂಪರ್ಕದಲ್ಲಿದ್ದುದು ಪತ್ತೆಯಾಗಿದೆ. ಇದಕ್ಕೆ ಪೂರಕವಾಗಿ ಸಾಕ್ಷ್ಯಗಳು ಲಭ್ಯವಾಗಿವೆ. ಇಬ್ಬರೂ ಆರೋಪಿಗಳ ವಿರುದ್ಧದ ಆಪಾದನೆಗಳು ತುಂಬಾ ಗಂಭೀರವಾಗಿವೆ. ಅವರನ್ನು ಹೆಚ್ಚಿನ ವಿಚಾರಣೆ ನಡೆಸಬೇಕಿದೆ‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.