ನವದೆಹಲಿ: ಪಿಟಿಸಿಎಲ್ ಭೂಮಿ ಪರಭಾರೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಭೂಮಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿರುವ ವ್ಯಕ್ತಿಗಳು ನಂತರ ಅದರ ಮಾರಾಟ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ ಎಂದು ತಿಳಿಸಿದೆ.

ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ನಿರ್ದಿಷ್ಟ ಭೂಮಿಯ ವರ್ಗಾವಣೆಯ ನಿರ್ಬಂಧ–ಪಿಟಿಸಿಎಲ್) ಕಾಯ್ದೆ ಅಡಿಯ ಭೂ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಈ ವಿವಾದಿತ ಭೂಮಿಯನ್ನು 1977ರಲ್ಲಿ ಮಂಜೂರು ಮಾಡಲಾಗಿತ್ತು. ನಂತರ 1997ರಲ್ಲಿ ಈ ಭೂಮಿಯು ಮೊದಲ ವರ್ಗಾವಣೆಯಾಗಿತ್ತು. 2003ರಲ್ಲಿ ಮೇಲ್ಮನವಿದಾರರಾದ ಸೀತಮ್ಮ ಎಂಬವರು ಖರೀದಿ ಮಾಡಿದ್ದರು. ಆದರೆ, ಈ ಮಾರಾಟ ಪ್ರಕ್ರಿಯೆ ಕಾನೂನುಬದ್ಧವಾಗಿಲ್ಲ. ಅದನ್ನು ರದ್ದುಗೊಳಿಸಬೇಕು ಎಂದು ಕೋರಿ ಮೂಲ ಮಂಜೂರುದಾರರ ಮಕ್ಕಳು 2006ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 4ರ ಅನುಸಾರ ಈ ಭೂಮಿಯನ್ನು ಮಾರಾಟ ಮಾಡುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂಬುದು ಅರ್ಜಿದಾರರ ವಾದವಾಗಿತ್ತು. ಇದನ್ನು ಪರಿಗಣಿಸಿದ್ದ ಹೈಕೋರ್ಟ್ ಮಾರಾಟ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸೀತಮ್ಮ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಪೀಠವು, ‘ಅರ್ಜಿದಾರರು ಮೂಲ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿದ್ದರು. ಆಗ ಅವರಿಗೆ 35 ಹಾಗೂ 25 ವರ್ಷ ಆಗಿತ್ತು. ಅವರಿಗೆ ಮಾರಾಟ ಪ್ರಕ್ರಿಯೆಯ ಕುರಿತು ಮಾಹಿತಿ ಇತ್ತು. ಅಲ್ಲದೆ, ಮಾರಾಟ ನಡೆದ 9 ವರ್ಷಗಳ ನಂತರ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ವಿಳಂಬವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಬೇಕಿತ್ತು‘ ಎಂದು ಅಭಿಪ್ರಾಯಪಟ್ಟಿದೆ. ಮಾರಾಟ ಪ್ರಕ್ರಿಯೆಯನ್ನು ಅನರ್ಹಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.