ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಕರೆದಿದ್ದಕ್ಕಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಕರ್ನಾಟಕ ಹೈಕೋರ್ಟ್ನ 2024ರ ಸೆಪ್ಟೆಂಬರ್ 27ರ ಆದೇಶ ಪ್ರಶ್ನಿಸಿ ಸೂಲಿಬೆಲೆ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರ ಪೀಠವು ಈ ಆದೇಶ ನೀಡಿತು.

ಯುವ ಬ್ರಿಗೇಡ್ ವತಿಯಿಂದ ರಾಯಚೂರು ಜಿಲ್ಲೆಯ ಸಿರಾವರದಲ್ಲಿ 2024ರ ಜನವರಿ 18ರಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ ಅವರು ಖರ್ಗೆ ಅವರನ್ನು ಅಯೋಗ್ಯ ಎಂದು ಕರೆದಿದ್ದರು. ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.