ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿ ಕಬಳಿಸುವ ಉದ್ದೇಶದಿಂದ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಸುಷ್ಮಾ ಎಸ್.ಆರಾಧ್ಯ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸಲು ಅವಕಾಶ ನೀಡಿದೆ.

ಅರ್ಜಿದಾರರು ರಾಜ್ಯಕ್ಕೆ ಪ್ರವೇಶಿಸುವಾಗ ಸುರಕ್ಷತೆ ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದರು. ‘ಅರ್ಜಿಯನ್ನು ಇ-ಫೈಲ್ ಮಾಡುವ ಆಯ್ಕೆ ಲಭ್ಯವಿದೆ’ ಎಂದು ನ್ಯಾಯಮೂರ್ತಿ ಮೆಹ್ತಾ ಗಮನಸೆಳೆದರು.

ವಿಚಾರಣೆ ಸಮಯದಲ್ಲಿ ಅರ್ಜಿದಾರರ ವಕೀಲರು, ‘ಮುಖ್ಯಮಂತ್ರಿ ಕಡೆಯವರ ನಿರಂತರ ಬೆದರಿಕೆಗಳಿಂದಾಗಿ ಅರ್ಜಿದಾರರು ಕರ್ನಾಟಕದಿಂದ ದೆಹಲಿಗೆ ಸ್ಥಳಾಂತರಗೊಳ್ಳಬೇಕಾಯಿತು’ ಎಂದು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಥ್, ‘ಕರ್ನಾಟಕದ ಮುಖ್ಯಮಂತ್ರಿಯವರು ದೆಹಲಿಯಲ್ಲಿ ನಿಮ್ಮ ಹಿಂದೆ ಜನರನ್ನು ಕಳುಹಿಸುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ‘ದೆಹಲಿಯಲ್ಲಿ ಅಲ್ಲ, ಕರ್ನಾಟಕದಲ್ಲಿ. ನಾನು ರಾಜ್ಯಕ್ಕೆ ಮರಳಿ ನನ್ನ ಆಸ್ತಿಯಲ್ಲಿ ಉಳಿದುಕೊಳ್ಳಲು ಬಯಸುತ್ತಿದ್ದೇನೆ. ಬೆದರಿಕೆ ಬಗ್ಗೆ ಹಲವು ಸಲ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಪರವಾಗಿ ನ್ಯಾಯಾಲಯ ಆದೇಶ ನೀಡಿದೆ. ಆದಾಗ್ಯೂ, ಬೆದರಿಕೆ ನಿರಂತರವಾಗಿ ಮುಂದುವರಿದಿದೆ. ಜನವರಿಯಲ್ಲಿ ದೌರ್ಜನ್ಯ ಮತ್ತಷ್ಟು ಹೆಚ್ಚಾಯಿತು. ಮನೆ ಮೇಲೆ ಕಲ್ಲು ತೂರಾಟ ನಡೆಸಿದರು. ಮನೆಯೊಳಗೆ ಗೂಂಡಾಗಳು ನುಗ್ಗಿ ದಾಂದಲೆ ನಡೆಸಿದರು. ನನ್ನ ಆಸ್ತಿ ಕಬಳಿಸುವ ಉದ್ದೇಶದಿಂದ ಈ ಕೃತ್ಯ ಎಸಗುತ್ತಿದ್ದಾರೆ‘ ಎಂದು ದೂರಿದರು.

ಆದಾಗ್ಯೂ, ಅರ್ಜಿದಾರರು ಸ್ವತಃ ರಾಜಕೀಯ ಹಿನ್ನೆಲೆ ಹೊಂದಿದ್ದಾರೆ ಮತ್ತು ನ್ಯಾಯಾಲಯದೊಳಗೆ ರಾಜಕೀಯ ಹೋರಾಟ ನಡೆಸುತ್ತಿದ್ದಾರೆ ಎಂದು ಪೀಠ ಗಮನಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.