ನವದೆಹಲಿ: ಪಿಎಸ್ಐ ಹಗರಣ ಹಾಗೂ ಕೆಇಎ ನೇಮಕಾತಿ ಪರೀಕ್ಷೆ ಬರೆಯಲು ಹಣ ಪಡೆದು ಬ್ಲೂಟೂತ್ ನೀಡಿದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಪಾಟೀಲ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠ, ‘ಒಂದು ವರ್ಷದ ವರೆಗೆ ಜಾಮೀನು ಅರ್ಜಿ ಸಲ್ಲಿಸದಂತೆ ಪೀಠವು ಜನವರಿಯಲ್ಲಿ ಸೂಚಿಸಿತ್ತು. ವರ್ಷ ಆಗುವ ಮುನ್ನವೇ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಪಾಟೀಲ ಪರ ವಕೀಲರು, ‘ನನ್ನ ಕಕ್ಷಿದಾರರು ಎರಡು ವರ್ಷ ಜೈಲಿನಲ್ಲಿ ಕಾಲ ಕಳೆದಿದ್ದಾರೆ. ಅವರ ಪಾಸ್ಪೋರ್ಟ್ ವಶಕ್ಕೆ ಪಡೆಯಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಕನಿಷ್ಠ ಎಂಟು ವಾರಗಳ ಮಟ್ಟಿಗಾದರೂ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು. ಈ ಮನವಿಯನ್ನು ಪೀಠ ತಿರಸ್ಕರಿಸಿತು.

ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪಾಟೀಲ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ನ್ಯಾಯಪೀಠ ಈ ಹಿಂದೆ ವಜಾಗೊಳಿಸಿತ್ತು. ಆ ಬಳಿಕ, ವೈದ್ಯಕೀಯ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಚಿಸಿತ್ತು. ಆರೋಪಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ ಎಂದು ಸಂಸ್ಥೆ ವರದಿ ನೀಡಿತ್ತು.

ಕರ್ನಾಟಕ ಸರ್ಕಾರದ ಪರ ವಕೀಲ ಡಿ.ಎಲ್.ಚಿದಾನಂದ ವಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.