ನವದೆಹಲಿ: ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್ನ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಪಡಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜಾಯ್ಮಲ್ಯ ಬಾಗ್ಚಿ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಿದೆ.

ಕ್ಷೇತ್ರದ ಮತಗಳ ಮರುಎಣಿಕೆ ನಡೆಸಿ, ಫಲಿತಾಂಶದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಪೀಠ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ನ ಅನುಮತಿಯಿಲ್ಲದೆ ಮರುಎಣಿಕೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಎಂದು ಪೀಠ ತಾಕೀತು ಮಾಡಿದೆ.
.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ.ನಂಜೇಗೌಡ ಪ್ರಕರಣ ಮತಕಳ್ಳತನಕ್ಕೆ ಪುರಾವೆ: ಬಿ.ವೈ.ವಿಜಯೇಂದ್ರ.
‘ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿಲ್ಲ. ಸಾಕಷ್ಟು ಅಕ್ರಮ ಎಸಗಲಾಗಿದೆ’ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಿಜೆಪಿಯ ಕೆ.ಎಸ್.ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠವು ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿತ್ತು.

‘ಈ ಕ್ಷೇತ್ರದ ಮತಗಳನ್ನು ನಾಲ್ಕು ವಾರಗಳಲ್ಲಿ ಪುನಃ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು. ಅದರಲ್ಲಿ ಯಾರು ಹೆಚ್ಚು ಮತಗಳಿಸಿದವರು ಎಂದು ಕಂಡುಬರುತ್ತದೆಯೋ ಅಂಥವರನ್ನು ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಿ’ ಎಂದು ನ್ಯಾಯಪೀಠ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಅರ್ಜಿಯಲ್ಲಿ ಏನಿತ್ತು?: ‘ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಸ್ಪರ್ಧಿಗಳ ಏಜೆಂಟರುಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಮತಗಳ ಎಣಿಕೆ ಒಂದೇ ಕೊಠಡಿಯಲ್ಲಿ ನಡೆಯಬೇಕಿತ್ತು. ಆದರೆ, ಎರಡು ಪ್ರತ್ಯೇಕ ಕೊಠಡಿಗಳಲ್ಲಿ ನಡೆದಿದೆ. ಈ ಮೂಲಕ ಜನಪ್ರತಿನಿಧಿಗಳ ಕಾಯ್ದೆ-1951 ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ, ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಮತಗಳ ಮರು ಎಣಿಕೆಗೆ ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದರು.
.ಮರು ಮತ ಎಣಿಕೆಯಲ್ಲಿ ಸೋತರೆ ರಾಜಕೀಯ ನಿವೃತ್ತಿ: ನಂಜೇಗೌಡ .ಕೋಲಾರ | ಮಂಜುನಾಥಗೌಡ ಗೆದ್ದರೆ ರಾಜಕೀಯ ನಿವೃತ್ತಿ: ನಂಜೇಗೌಡ ಸವಾಲು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.