ನವದೆಹಲಿ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಾಜಿ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ರಾಜೇಗೌಡ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು, ಏಪ್ರಿಲ್ 6ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಅನ್ವಯ ಕೈಗೊಳ್ಳಲಾದ ಎಲ್ಲಾ ಕ್ರಮಗಳನ್ನು ತಡೆಹಿಡಿಯುವಂತೆ ಸೂಚಿಸಿದೆ. ಮಧ್ಯಂತರ ಕ್ರಮವಾಗಿ ರಾಜೇಗೌಡ ಅವರನ್ನು ಶಾಸಕ ಸ್ಥಾನದಲ್ಲಿ ಮುಂದುವರಿಯಲು ಸೂಚಿಸಿದೆ.

ಸುಪ್ರೀಂ ಕೋರ್ಟ್ ಆದೇಶದಿಂದ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ರಾಜೇಗೌಡ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಮುಕುಲ್ ರೋಹಟಗಿ ಹಾಗೂ ದೇವದತ್ ಕಾಮತ್ ಅವರು ಹೈಕೋರ್ಟ್ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿದ್ದರು. ಜೀವರಾಜ್ ಪರವಾಗಿ ಹಾಜರಿದ್ದ ಹಿರಿಯ ವಕೀಲ ವಿ. ಗಿರಿ ಅವರು, ಜೀವರಾಜ್ ಅವರು ಈಗಾಗಲೇ ಸ್ಪೀಕರ್ ಅವರಿಂದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ವಾದಿಸಿದರು.

‘ಪ್ರಜಾಪ್ರಭುತ್ವವನ್ನು ಈ ರೀತಿ ಹೈಜಾಕ್ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ ನ್ಯಾಯಪೀಠವು, ಕರ್ನಾಟಕ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಜತೆಗೆ, ಪ್ರಕರಣದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ...

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜೇಗೌಡ ಅವರು ಜೀವರಾಜ್ ಅವರನ್ನು 201 ಮತಗಳ ಅಂತರದಿಂದ ಸೋಲಿಸಿದ್ದರು. 1,811 ಅಂಚೆಮತಗಳು ಚಲಾವಣೆಯಾಗಿದ್ದವು.

ರಾಜೇಗೌಡಅವರ ಸಮೀಪದ ಪ್ರತಿಸ್ಪರ್ಧಿ ಡಿ.ಎನ್.ಜೀವರಾಜ್ ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿ, ‘1951ರ ಜನ ಪ್ರಾತಿನಿಧ್ಯ ಕಾಯ್ದೆ ಮತ್ತು ಭಾರತ ಚುನಾವಣಾ ಆಯೋಗ ಹೊರಡಿಸಿದ ಚುನಾವಣಾ ಅಧಿಕಾರಿಯ ಕೈಪಿಡಿಯ ನಿಬಂಧನೆಗಳ ಪ್ರಕಾರ, ಪ್ರತಿವಾದಿ ವಿಜೇತ ಅಭ್ಯರ್ಥಿಯು ಚುನಾವಣೆಯಲ್ಲಿ ಎಸಗಿರುವ ದುಷ್ಕೃತ್ಯಗಳು, ಅಪರಾಧಗಳು, ಅನೈತಿಕ ಕೃತ್ಯಗಳು ಮತ್ತು ಲೋಪಗಳ ಆರೋಪಗಳನ್ನು ಪರಿಗಣಿಸಬೇಕು. ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳನ್ನು ಕಾನೂನಿನ ಪ್ರಕಾರ ಮರು ಎಣಿಕೆ ಮಾಡಲು ಆದೇಶಿಸಿ ಫಲಿತಾಂಶ ಗಳನ್ನು ಹೊಸದಾಗಿ ಘೋಷಿಸಲು ಆದೇಶಿಸಬೇಕು’ ಎಂದುಕೋರಿದ್ದರು. ಹೈಕೋರ್ಟ್ ಆದೇಶದ ಪ್ರಕಾರ, ಈಚೆಗೆ ಮರು ಮತ ಎಣಿಕೆ ನಡೆಸಲಾಗಿತ್ತು.

2023ರಲ್ಲಿ ಸಿಂಧುವಾಗಿದ್ದ 1,540 ಮತಗಳಲ್ಲಿ 255 ಮತಗಳು ಮರು ಮತ ಎಣಿಕೆ ವೇಳೆ ಅಸಿಂಧುವಾಗಿದ್ದರಿಂದ ರಾಜೇಗೌಡ ಅವರ ಶಾಸಕ ಸ್ಥಾನಕ್ಕೆ ಕುತ್ತು ಉಂಟಾಗಿತ್ತು. 52 ಮತಗಳ ಮುನ್ನಡೆ ಸಾಧಿಸಿದ್ದ ಜೀವರಾಜ್ ಅವರನ್ನು ಚುನಾಯಿತ ಎಂದು ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.