ನವದೆಹಲಿ: ಪ್ರಕರಣದ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

‘ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ’ ಎಂದು ಹೈಕೋರ್ಟ್ 2022ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಪಂಚೋಲಿ ಅವರ ಪೀಠವು, ಅರ್ಜಿದಾರರ ಸವಲತ್ತುಗಳನ್ನು ತಡೆ ಹಿಡಿಯುವುದಾಗಿ ಎಚ್ಚರಿಕೆ ನೀಡಿತು.

ಪ್ರಕರಣದ ವಿಚಾರಣೆ ಮುಂದೂಡಬೇಕು ಎಂದು ಪ್ರಾಣೇಶ್ ಪರ ವಕೀಲರು ಮನವಿ ಮಾಡಿದರು. ಇದರಿಂದ ಕುಪಿತಗೊಂಡ ಸಿಜೆಐ ಪೀಠ, ‘ವಿಚಾರಣೆ ಮುಂದೂಡುವಂತೆ ಅರ್ಜಿದಾರರು ಪದೇ ಪದೇ ಮನವಿ ಮಾಡುತ್ತಿದ್ದಾರೆ. ಇದು ಕಡೆಯ ಎಚ್ಚರಿಕೆ. ವಿಚಾರಣೆ ಮುಂದೂಡುವಂತೆ ಇನ್ನು ಮುಂದೆ ಮನವಿ ಮಾಡಿದರೆ ಉಪಸಭಾಪತಿಯ ವೇತನ, ಇತರ ಸವಲತ್ತುಗಳನ್ನು ತಡೆ ಹಿಡಿಯಲಾಗುವುದು. ಅಲ್ಲದೇ, ಪರಿಷತ್ನ ಕಲಾಪಗಳಲ್ಲಿ ಮತದಾನದ ಹಕ್ಕಿಗೂ ತಡೆ ಒಡ್ಡಲಾಗುವುದು’ ಎಂದು ಎಚ್ಚರಿಸಿತು. ಬಳಿಕ ಇದೇ 24ಕ್ಕೆ ವಿಚಾರಣೆ ಮುಂದೂಡಿತು.

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ 2021ರ ಡಿಸೆಂಬರ್ 14ರಂದು ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಬಾಕಿ 2,371 ಮತಗಳು ಸಿಂಧುವಾಗಿದ್ದವು. ಅವುಗಳ ಪೈಕಿ ಬಿಜೆಪಿಯ ಎಂ.ಕೆ. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಎ.ವಿ. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನ ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅಂದಿನ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು.

‘ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರ ಪಟ್ಟಣ ಪಂಚಾಯಿತಿಗಳ ಒಟ್ಟು 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ’ ಎಂದು ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಪ್ರಾಣೇಶ್ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, 12 ಮತಗಳನ್ನು ಪ್ರತ್ಯೇಕವಾಗಿ ಇರಿಸಿ ಮರು ಎಣಿಕೆ ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿತ್ತು. ಮರು ಮತ ಎಣಿಕೆಯ ವರದಿಯನ್ನು ಜಿಲ್ಲಾಧಿಕಾರಿಯವರು 2025ರ ಮಾರ್ಚ್ನಲ್ಲಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.