ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿಕೊಂಡ ಹೋರಾಟಗಾರನಿಗೆ ಅಂತಃಕರಣ ಹಾಗೂ ಸಮಾಜದ ಬಗ್ಗೆ ಕಾಳಜಿ ಇರಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಸಲಹೆ ನೀಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರಿಗೆ ಬಸ್ ಸಂಚರಿಸದಿದ್ದ ಸಂದರ್ಭದಲ್ಲಿಯೂ ನೌಕರರಿಗೆ ವೇತನ ನೀಡಲಾಗಿದೆ. ಒಂಬತ್ತು ಬೇಡಿಕೆಗಳ ಪೈಕಿ ವೇತನ ಪರಿಷ್ಕರಣೆ ಬಿಟ್ಟು ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದರೂ, ಹಠ ಹಿಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಕೊರೊನಾ ಸೋಂಕು ಕಾಣಿಸಿಕೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಸಮಸ್ಯೆ ಆಗುವಂತೆ ಹೋರಾಟ ಮಾಡುವುದು ಸರಿಯಲ್ಲ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಚರ್ಚೆ ಮಾಡೋಣ. ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.