ನವದೆಹಲಿ: ಪಕ್ಷ ಸಂಘಟನೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕುರಿತಂತೆ ಎರಡು ಹಂತಗಳಲ್ಲಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಗುರುವಾರ ಸಂಜೆ ಸಭೆ ನಡೆಸಲಿದ್ದಾರೆ.

ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಶಾಸಕರಾದ ಬಿ.ಆರ್. ಪಾಟೀಲ ಮತ್ತು ರಾಜು ಕಾಗೆ ಅವರು ಬಹಿರಂಗವಾಗಿ ಆರೋಪ ಮಾಡಿದ ಬೆನ್ನಲ್ಲೇ ಹಲವು ಶಾಸಕರು ಅನುದಾನ ಕೊರತೆ, ಸಚಿವರ ಅಸಹಕಾರ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಸುರ್ಜೇವಾಲಾ ಅವರು ಜೂನ್ 30ರಿಂದ ಮೂರು ದಿನ ಬೆಂಗಳೂರು, ಮೈಸೂರು ವಿಭಾಗದ 42 ಶಾಸಕರೊಂದಿಗೆ ಸಭೆ ನಡೆಸಿದ್ದರು. ಎರಡನೇ ಹಂತದಲ್ಲಿ 61 ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಎರಡು ವರ್ಷದಲ್ಲಿ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆ, ಭವಿಷ್ಯದ ಯೋಜನೆಗಳು, ಕ್ಷೇತ್ರದಲ್ಲಿ ಕೆಲಸ ಮಾಡಲು ಉಂಟಾಗುತ್ತಿರುವ ಅಡ್ಡಿಗಳು, ಸರ್ಕಾರ ಹಾಗೂ ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಹಲವು ಶಾಸಕರು ಅಳಲು ತೋಡಿಕೊಂಡಿದ್ದರು. ಸರ್ಕಾರದ ಕಾರ್ಯಶೈಲಿಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸುರ್ಜೇವಾಲಾ ವರದಿ ಸಿದ್ಧಪಡಿಸಿದ್ದಾರೆ. ಸರ್ಕಾರದಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಮೊದಲ ಹಂತದಲ್ಲಿ 34 ನಿಗಮ ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. ಎರಡನೇ ಹಂತದ ನೇಮಕಾತಿ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲಾಗುವುದು ಎಂದು ಪಕ್ಷ ಈ ಹಿಂದೆ ಪ್ರಕಟಿಸಿತ್ತು. ಈ ನಿಗಮಗಳಿಗೆ ಅಧ್ಯಕ್ಷರ ಹೆಸರನ್ನು ಗುರುವಾರ ಆಖೈರುಗೊಳಿಸುವ ಸಂಭವ ಇದೆ. ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಕೆಲವು ಶಾಸಕರಿಗೂ ಅಧ್ಯಕ್ಷ ಸ್ಥಾನ ನೀಡುವ ಚರ್ಚೆ ಆರಂಭವಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಪ್ಪುವ ಸಾಧ್ಯತೆ ಕಡಿಮೆ. ಎಲ್ಲ ನಿಗಮಗಳಿಗೆ ನಿರ್ದೇಶಕರ ಹಾಗೂ ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಪ್ರಕ್ರಿಯೆ ಅಂತಿಮಗೊಳ್ಳಬೇಕಿದೆ. ಈ ಹಿಂದೆಯೇ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಈ ಪಟ್ಟಿಗೆ ಹೈಕಮಾಂಡ್ ತಡೆ ಒಡ್ಡಿತ್ತು. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ನಾಮನಿರ್ದೇಶನ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಗೆ ಕಾಲಾವಕಾಶ ಕೇಳಿದ್ದಾರೆ. ಉಭಯ ನಾಯಕರು ಪ್ರತ್ಯೇಕವಾಗಿ ರಾಹುಲ್ ಅವರನ್ನು ಭೇಟಿ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.