ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೈ’ ಉಸ್ತುವಾರಿಯಾಗಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮುಂದುವರಿಕೆ

Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಿರುವ ಎಐಸಿಸಿ, ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನೇ ಮುಂದುವರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸುರ್ಜೇವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ‘ಉಸ್ತುವಾರಿ’ಯಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಲ್ಲಿ ಪಕ್ಷ ಸಂಘಟನೆಯ ಹೊಣೆ ನಿಭಾಯಿಸಿರುವ ಅವರು, ಕಾಂಗ್ರೆಸ್‌ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಶ್ರಮ ವಹಿಸಿದ್ದಾರೆ.

ರಾಜ್ಯ ಸಭೆ ಸದಸ್ಯ ಸಯ್ಯದ್‌ ನಾಸೀರ್‌ ಹುಸೇನ್‌ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಉಸ್ತುವಾರಿ ಆಗಿ ನೇಮಿಸಲಾಗಿದೆ. ಖರ್ಗೆ ಅವರ ಆಪ್ತ ವಲಯದಲ್ಲಿ ಹುಸೇನ್‌ ಗುರುತಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT