ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ: ಸುರ್ಜೆವಾಲಾ ಆಗ್ರಹ

Published 3 ಫೆಬ್ರುವರಿ 2024, 16:11 IST
Last Updated 3 ಫೆಬ್ರುವರಿ 2024, 16:11 IST
ಅಕ್ಷರ ಗಾತ್ರ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ. 

‘ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು. ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು. ಶ್ರೀಗಳು ಇಡೀ ದೇಶಕ್ಕೇ ಮಾದರಿಯಾಗಿದ್ದವರು.

ಅವರಿಗೆ ಭಾರತರತ್ನ ನೀಡಬೇಕು ಎಂಬುದು ಆರೂವರೆ ಕೋಟಿ ಜನರ ಭಾವನೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT