ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: BJP ಮೊದಲ ಪಟ್ಟಿಯಲ್ಲಿ ಅಚ್ಚರಿ ಅಭ್ಯರ್ಥಿಗಳು– R ಅಶೋಕ ಸುಳಿವು

Published 12 ಮಾರ್ಚ್ 2024, 15:55 IST
Last Updated 12 ಮಾರ್ಚ್ 2024, 15:55 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಒಂದೆರಡು ದಿನಗಳಲ್ಲಿ ಪ್ರಕಟವಾಗಲಿದ್ದು, ಅಚ್ಚರಿಯ ಅಭ್ಯರ್ಥಿಗಳು ಇರಲಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸುಳಿವು ನೀಡಿದರು. 

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲಿ ಭಾಗಿಯಾಗಲು ನವದೆಹಲಿಗೆ ಬಂದಿರುವ ಅವರು ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ‘ಚುನಾವಣಾ ಸಮಿತಿ ಸಭೆಯಲ್ಲಿ 28 ಕ್ಷೇತ್ರಗಳ ಬಗ್ಗೆಯೂ ಚರ್ಚೆಯಾಗಿದೆ. ಕೇಂದ್ರ ನಾಯಕರು ನಮ್ಮ ಅಭಿಪ್ರಾಯಗಳನ್ನು ಪಡೆದಿದ್ದಾರೆ. ನಾಲ್ಕು ಗೋಡೆಗಳ ನಡುವೆ ನಡೆದ ಚರ್ಚೆಯನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ’ ಎಂದರು. 

‘ಕೆಲವು ಸಂಸದರು ಈಗಾಗಲೇ ನಿವೃತ್ತಿ ‍ಪ್ರಕಟಿಸಿದ್ದಾರೆ. ಸಹಜವಾಗಿ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂಸದರಾದ ಅನಂತಕುಮಾರ್ ಹೆಗಡೆ, ಪ್ರತಾಪಸಿಂಹ ಅವರ ಬಗ್ಗೆಯೂ ಚರ್ಚೆಯಾಗಿದೆ. ಪ್ರತಾಪಸಿಂಹ ವಿಶ್ವಾಸ ಕಳೆದುಕೊಳ್ಳುವುದು ಬೇಡ. ಅಭ್ಯರ್ಥಿಗಳು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಕೊನೆಯ ಕ್ಷಣದವರೆಗೆ ಏನೂ ಬೇಕಾದರೂ ಆಗಬಹುದು’ ಎಂದು ಅವರು ಹೇಳಿದರು. 

ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಮೈಸೂರಿನಿಂದ ಸ್ಪರ್ಧಿಸುವ ವಿಷಯದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯ ನನಗೆ ಗೊತ್ತಿಲ್ಲ. ನಾನು ಅವರನ್ನು ಸಂಪರ್ಕಿಸಿಲ್ಲ. ಇತರ ನಾಯಕರು ಸಂಪರ್ಕಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT