ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ರೇಣುಕಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಶರಣಾಗತಿ

Published 14 ಜೂನ್ 2024, 14:40 IST
Last Updated 14 ಜೂನ್ 2024, 14:40 IST
ಅಕ್ಷರ ಗಾತ್ರ

ಚಿತ್ರದುರ್ಗ: ರೇಣುಕಸ್ವಾಮಿ ಕೊಲೆ ಪ್ರಕರಣದ 6ನೇ ಆರೋಪಿ, ನಗರದ ರೈಲ್ವೆಸ್ಟೇಷನ್‌ ಬಡಾವಣೆ ನಿವಾಸಿ ಜಗದೀಶ್‌ ಅಲಿಯಾಸ್‌ ಜಗ್ಗ, 7ನೇ ಆರೋಪಿ ಅನು ಅಲಿಯಾಸ್‌ ಅನುಕುಮಾರ್‌ ಶುಕ್ರವಾರ ಬೆಳಿಗ್ಗೆ ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ಶರಣಾದರು.

ಇಬ್ಬರೂ ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು.

ಚಿತ್ರದುರ್ಗ ಉಪ ವಿಭಾಗದ ಡಿವೈಎಸ್‌ಪಿ ಹಾಗೂ ಕಾಮಾಕ್ಷಿ ಪಾಳ್ಯ ಪೊಲೀಸರ ತಂಡಗಳು ನಗರದಲ್ಲಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ವಿಷಯ ತಿಳಿದು ಆರೋಪಿಗಳು ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಗದೀಶ್‌, ಅನುಕುಮಾರ್‌ ಇಬ್ಬರೂ ದರ್ಶನ್‌ ಅಭಿಮಾನಿಗಳಾಗಿದ್ದಾರೆ, ದರ್ಶನ್‌ ಜೊತೆಗಿರುವ ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.

‘ವಿಚಾರಣಾಧಿಕಾರಿ ಮುಂದೆ ಸತ್ಯ ಹೇಳುತ್ತೇವೆ ಎಂದು ಕಚೇರಿಗೆ ಹಾಜರಾಗಿದ್ದರು. ಅವರನ್ನು ನಾವು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರಿಗೆ ಒಪ್ಪಿಸಿದ್ದೇವೆ, ನಾವು ವಿಚಾರಣೆ ನಡೆಸಿಲ್ಲ‘ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ ‘ಪ್ರಜಾವಾಣಿ‘ಗೆ ತಿಳಿಸಿದರು.

8ನೇ ಆರೋಪಿ ಹಸ್ತಾಂತರ: ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದ 8 ನೇ ಆರೋಪಿ ರವಿಯನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ‌ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT