ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆಗೆ ಚರ್ಚೆ: ಡಿ.ಕೆ. ಶಿವಕುಮಾರ್‌

Published 27 ನವೆಂಬರ್ 2023, 21:12 IST
Last Updated 27 ನವೆಂಬರ್ 2023, 21:12 IST
ಅಕ್ಷರ ಗಾತ್ರ

ಬೆಂಗಳೂರು: ‘ಜನರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸುವ ಉದ್ದೇಶದಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

‘ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮ ಮಹತ್ವದ ಹೆಜ್ಜೆ’ ಎಂದೂ ಅವರು ಬಣ್ಣಿಸಿದ್ದಾರೆ.

‘ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ. ಜನಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನ ಕಾರ್ಯಕ್ರಮಕ್ಕೆ ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆಡಳಿಕ್ಕೆ ವೇಗ ನೀಡಿ ಸರಕಾರದ ಎಲ್ಲಾ ಯೋಜನೆಗಳ ಲಾಭ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪಿಸುವಂತೆ ಎಚ್ಚರ ವಹಿಸಲಾಗುವುದು. ಸರ್ಕಾರದ ಆಶಯಗಳಿಗೆ ತಕ್ಕಂತೆ ನಮ್ಮ ಯೋಜನೆ ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವ ಆಲೋಚನೆಯೂ ಇದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT