ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.