ಬೆಂಗಳೂರು: ‘ಜನವರಿ 26 ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕು’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ತಮ್ಮ ‘X’ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ, ‘ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನಾನು ಪತ್ರ ಬರೆದಿದ್ದೇನೆ. ಪತ್ರದಲ್ಲಿ 7 ಕೋಟಿ ಕನ್ನಡಿಗರ ಮನದಾಳದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ’ ಎಂದಿದ್ದಾರೆ.

‘ಕರ್ನಾಟಕ ಸ್ತಬ್ಧಚಿತ್ರ ಕಳೆದ 14 ವರ್ಷಗಳಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಿರಂತರವಾಗಿ ಪ್ರದರ್ಶನಗೊಳ್ಳುತ್ತಿದೆ. ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಈ ಬಾರಿ ರಾಜ್ಯದಿಂದ ಸಲ್ಲಿಸಿದ್ದ ಐದು ವಿಷಯಗಳಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ವಿಷಯವು ಆಯ್ಕೆಯಾಗಿತ್ತು. ರಕ್ಷಣಾ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗವಹಿಸಿದ್ದರು. ಕೊನೆಯ ಸುತ್ತಿನ ಸಭೆಯ ಬಳಿಕ ‘ಕರ್ತವ್ಯ ಪಥ’ದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು ಪರಿಗಣಿಸಿಲ್ಲ. ರಾಜ್ಯದ ಸ್ತಬ್ಧಚಿತ್ರವು ಸಾಂಪ್ರದಾಯಿಕ ನಗರವಾದ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ. ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಹೇಗೆ ದೃಢವಾಗಿ ಬೇರೂರಿದೆ ಎಂಬುದನ್ನು ಕಟ್ಟಿಕೊಡುತ್ತಿದೆ’ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.