ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ.
ನಾವು ಯಾವ ಕೋಮುವಾದಿ ಸಂಘಟನೆಯನ್ನು ಪೋಷಿಸಿಕೊಂಡು ಬಂದಿಲ್ಲ. ಕೋಮುವಾದಿ ಚಟುವಟಿಕೆಗಳಲ್ಲಿ ಭಾಗವಹಿಸುವ ಯಾವುದೇ ಸಂಘಟನೆಗಳಾದರೂ ಅವುಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಿ. ರಾಜ್ಯದ ಮುಖ್ಯಮಂತ್ರಿಯಾಗಿ @BSYBJP ಅವರು ಶಾಸಕರೊಬ್ಬರ ಮೇಲಿನ ಹಲ್ಲೆ ವಿಚಾರದಲ್ಲಿ ರಾಜಕೀಯ ದುರುದ್ದೇಶದಿಂದ ಕೂಡಿದ ಹೇಳಿಕೆ ನೀಡುವುದು ಸರಿಯಲ್ಲ.