ಹೊಸಪೇಟೆ: ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವ ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಅವರು ಭಾನುವಾರ ಚೆನ್ನೈಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಹೊಸಪೇಟೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ದೇಶದ ಪ್ರಜಾಪ್ರಭುತ್ವ ಮತ್ತು ಸಮ್ಮಿಶ್ರ ರಾಜಕಾರಣದ ಯಶಸ್ಸಿನ ಪರವಾಗಿ ಕಾರ್ಯಕರ್ತರು ಜೈಕಾರ ಹಾಕಿದರು.

ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ ಮಾತನಾಡಿ, ದಕ್ಷಿಣ ಭಾರತದಲ್ಲಿ ಮನುವಾದಿ ಸಿದ್ಧಾಂತದ ಬಿಜೆಪಿ ಪಕ್ಷವು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕೋಮು ಭಾವನೆ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಹೊಂದಿರುವ ಸಂವಿಧಾನ ವಿರೋಧಿ ಮನಸ್ಥಿತಿ ತುಂಬಿಕೊಂಡಿರುವುದೇ ಅದಕ್ಕೆ ಕಾರಣ ಎಂದರು.

ಮುಖಂಡರಾದ ತಾಳೂರು ವೀರಭದ್ರ, ಸಜ್ಜಾತ್ ಖಾನ್, ರಘು, ನಾಗರಾಜ್, ಗಿರೀಶ್, ಪ್ರಕಾಶ್, ಬಿ.ಮೌಲಾಲಿ, ಶಶಿಕುಮಾರ್, ಕಿಶೋರ್ ಕುಮಾರ್, ಕಾರ್ತಿಕ್, ಗಣೇಶ್, ಯೋಹಾನ್, ಹಮೀದ್ ಹುಸೇನ್, ಬಾಬಾ ಫಕ್ರುದ್ದೀನ್, ಆಶಾ ಬೇಗಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-25-1758694187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.