ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳರು ನಮ್ಮ ಸಹೋದರರು, ಮೇಕೆದಾಟಿನಿಂದ ಉಭಯ ರಾಜ್ಯಗಳಿಗೆ ಅನುಕೂಲ: ಡಿ.ಕೆ ಶಿವಕುಮಾರ್‌

Published 1 ಜೂನ್ 2023, 10:11 IST
Last Updated 1 ಜೂನ್ 2023, 10:11 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನ ನಮ್ಮ ಸೋದರರ ಮೇಲೆ ಕೋಪವಾಗಲಿ, ದ್ವೇಷವಾಗಲಿ ಇಲ್ಲ. ಅವರು ನಮ್ಮ ಅಣ್ಣತಮ್ಮಂದಿರಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ಬಗ್ಗೆ ಅವರು ಟ್ವೀಟ್‌ ಮಾಡಿದ್ದು, ಅದರಲ್ಲಿ ಹೀಗೆ ಹೇಳಿದ್ದಾರೆ.

ಡಿ.ಕೆ ಶಿವಕುಮಾರ್‌ ಅವರ ಟ್ವೀಟ್‌ ಹೀಗಿದೆ.

‘ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ ಆದರೆ ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲಿ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ, ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT