ತರೀಕೆರೆ: ‘ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ, ಅದು ಸೈದ್ಧಾಂತಿಕ ಆಂದೋಲನ. ಭಾರತೀಯ ಚಿಂತನೆಗಳು ಜಗತ್ತಿನ ಕಲ್ಯಾಣವನ್ನು ಬಯಸುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಲಿಂಗದಹಳ್ಳಿ ಬಳಿಯ ಪ್ರಕೃತಿ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಬಿಜೆಪಿ ಕರ್ನಾಟಕ ಪ್ರಶಿಕ್ಷಣ ಮಹಾಭಿಯಾನ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, 17 ಕೋಟಿ ಸದಸ್ಯರನ್ನು ಹೊಂದಿದೆ. 1,850ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿರುವ ಪಕ್ಷದ ಉದ್ದೇಶ ಕೇವಲ ಅಧಿಕಾರ ಸಾಧನೆಯಲ್ಲ. ಬದಲಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಭಾರತವನ್ನು ವಿಶ್ವಗುರುವನ್ನಾಗಿಸುವುದಾಗಿದೆ’ ಎಂದರು.

‘ಸರ್ವೇ ಜನಾಃ ಸುಖಿನೋ ಭವಂತು’ ಎಂಬುದು ಭಾರತೀಯ ಚಿಂತನೆಯ ಮೂಲ ಆಶಯ. ಆರ್ಥಿಕ ಬದಲಾವಣೆ ಸರ್ವವ್ಯಾಪಿಯಾಗಬೇಕು. ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ಕೆಲಸ ಆಗಬೇಕು. ರಾಷ್ಟ್ರ ಮೊದಲು ಎಂಬ ಸಿದ್ಧಾಂತದೊಂದಿಗೆ ಸೈದ್ಧಾಂತಿಕ ಬದ್ಧತೆಯಿಂದ ಜನನಾಯಕತ್ವ ಬೆಳೆಸಬೇಕಿದೆ’ ಎಂದರು.

ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವವರು ಖಾಲಿ ಪಾತ್ರೆಯಂತೆ ಕುಳಿತು ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು. ಪ್ರಸ್ತುತ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ತೊಡಗಿದ್ದು, ಜನರ ಬದುಕು ಶೂನ್ಯವಾಗಿದೆ. ರೈತರ ಆತ್ಮಹತ್ಯೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ ಎಂದು ಅವರು ಆರೋಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯತೆಯನ್ನು ಮೊದಲಿಗಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತದೆ. ಪ್ರಶಿಕ್ಷಣ ವರ್ಗದಲ್ಲಿ ಕಲಿಯುವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪ್ರಮುಖ ಅಶೋಕ್ ಮೂರ್ತಿ ಮಾತನಾಡಿ, ಸಂಘಟನೆಗೆ ಶಕ್ತಿ ತುಂಬುವ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕರಾದ ಡಿ.ಎಸ್. ಸುರೇಶ್, ಎಸ್.ಎಂ. ನಾಗರಾಜ್, ಬೆಳ್ಳಿಪ್ರಕಾಶ್, ಮುಖಂಡರಾದ ಕಲ್ಮರುಡಪ್ಪ, ಪ್ರೇಂಕುಮಾರ್, ಕೆ.ಆರ್. ಧ್ರುವಕುಮಾರ್, ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಟಿ.ಎಂ. ಬೋಜರಾಜ್, ರಾಜೇಶ್ವರಿ ರಾಜಶೇಖರ್, ಚೈತ್ರಶ್ರೀ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-464764748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.