ನವದೆಹಲಿ: ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಣೆಗೆ ಸಂಬಂಧಿಸಿ ಕಾರ್ಯಪಡೆಯೊಂದನ್ನು ರಚಿಸಲಾಗಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಇತ್ತೀಚೆಗೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದರು. ಆ ಸಂದರ್ಭದಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಕೆಲವು ಭಾಗಗಳಲ್ಲಿ ಅಂತರ್ಜಾಲ ಸಂಪರ್ಕ ಲಭ್ಯತೆ ಮತ್ತು ವೇಗದ ಸುಧಾರಣೆಗೆ ಹಲವಾರು ಮನವಿಗಳನ್ನು ಸ್ವೀಕರಿಸಲಾಗಿತ್ತು. ಪ್ರತಿಯೊಂದು ಜಿಲ್ಲೆಗಳಲ್ಲೂ ಆ ಬಗ್ಗೆ ಅಧ್ಯಯನ ನಡೆಸಲು ಕಾರ್ಯಪಡೆಯನ್ನು ಕಳುಹಿಸುವುದಾಗಿ ಸಚಿವರು ಭರವಸೆ ನೀಡಿದ್ದರು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಓದಿ:ಇಂಟರ್ನೆಟ್ ಸೇವೆ ಬಲಪಡಿಸಲು ಆದ್ಯತೆ: ರಾಜೀವ್ ಚಂದ್ರಶೇಖರ್

‘ಸಚಿವರು ನೀಡಿದ್ದ ಭರವಸೆಯಂತೆ ನ್ಯಾಷನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾ (ಎನ್ಐಎಕ್ಸ್ಐ) ಮತ್ತು ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್ಟಿಪಿಐ) ಪ್ರತಿನಿಧಿಗಳನ್ನು ಒಳಗೊಂಡ ಕಾರ್ಯಪಡೆಯನ್ನು ರಚನೆ ಮಾಡಲಾಗಿದೆ. ಕಾರ್ಯಪಡೆಯ ಸದಸ್ಯರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಿದ್ದಾರೆ. ಅವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಮತ್ತು ಸಚಿವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

ಓದಿ:ಟಯರ್ 2 ನಗರಗಳಲ್ಲಿ ಇಂಟರ್ನೆಟ್ ಸೇವೆ ಬಲಪಡಿಸಲು ಆದ್ಯತೆ: ರಾಜೀವ್ ಚಂದ್ರಶೇಖರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.