ತೌಕ್ತೆ ಚಂಡಮಾರುತದ ಪ್ರಭಾವ ಭಾನುವಾರವೂ ಮುಂದುವರಿದಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು ಮತ್ತು ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಅಪಾರ ಪ್ರಮಾಣದ ನಾಶ-ನಷ್ಟ ಅಂದಾಜಿಸಲಾಗಿದೆ. ಹಲವೆಡೆ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಚಂಡಮಾರುತದಿಂದಾಗಿ ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ತೌಕ್ತೆಯಿಂದ ಉಂಟಾಗುವ ಪರಿಣಾಮವನ್ನು ಸಮರ್ಥವಾಗಿ ನಿಭಾಯಿಸಲು ರಕ್ಷಣಾ ಪಡೆಗಳು ಸಜ್ಜಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.