ಬೆಂಗಳೂರು: ಕೇಂದ್ರದ ತೆರಿಗೆ ಆದಾಯ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂಬ ವಿಚಾರದಲ್ಲಿ ಮತ್ತೆ ಹೋರಾಟ ಸಂಘಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಜತೆಗೆ, ಕಡಿಮೆ ತೆರಿಗೆ ಪಾಲು ಪಡೆಯುತ್ತಿರುವ ಬಿಜೆಪಿ ಆಡಳಿತದ ರಾಜ್ಯಗಳನ್ನೂ ಈ ಹೋರಾಟಕ್ಕೆ ತರಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.

ಈ ಅನ್ಯಾಯದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅತಿಹೆಚ್ಚು ತೆರಿಗೆ ಪಾವತಿಸಿಯೂ ಕಡಿಮೆ ಪಾಲು ಪಡೆಯುತ್ತಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಮಾಹಿತಿಯನ್ನು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪತ್ರದ ಪ್ರತಿಯನ್ನು ಲಗತ್ತಿಸಿದ್ದಾರೆ.

ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದು, ‘ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕದಂತಹ ಹಲವು ರಾಜ್ಯಗಳನ್ನು ಅವುಗಳ ಸಾಧನೆಯ ಕಾರಣಕ್ಕೇ ದಂಡಿಸಲಾಗುತ್ತಿದೆ. ಇದರ ವಿರುದ್ಧ ದನಿ ಎತ್ತಬೇಕಿದೆ’ ಎಂದಿದ್ದಾರೆ.

‘ಈ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗುತ್ತದೆ. ಸಭೆಯ ದಿನಾಂಕ ಮತ್ತು ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ. ತೆರಿಗೆ ಅನ್ಯಾಯವನ್ನು ಸರಿಪಡಿಸಿ ಎಂದು 16ನೇ ಹಣಕಾಸು ಆಯೋಗವನ್ನು ಒತ್ತಾಯಿಸಲು ತಾವೆಲ್ಲರೂ ಆ ಸಭೆಯಲ್ಲಿ ಭಾಗಿಯಾಗಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.