ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆರಿಗೆ ಪಾಲು: ರಾಜ್ಯಕ್ಕೆ ₹ 5,096 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Published 10 ಜೂನ್ 2024, 20:25 IST
Last Updated 10 ಜೂನ್ 2024, 20:25 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹5,096 ಕೋಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,39,750 ಕೋಟಿ ಬಿಡುಗಡೆಗೊಳಿಸಿದೆ. 

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ.

‘ಜೂನ್‌ ತಿಂಗಳ ಕಂತಿನ ಹೊರತಾಗಿ, ಒಂದು ಹೆಚ್ಚುವರಿ ಕಂತು ಬಿಡುಗಡೆಗೊಳಿಸಲಾಗಿದೆ. ಇದು ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲವಾಗುತ್ತದೆ’ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ. 

2024–25ನೇ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ರಾಜ್ಯಗಳಿಗೆ ತೆರಿಗೆ ಪಾಲಿನ ರೂಪದಲ್ಲಿ ₹12,19,783 ಕೋಟಿ ನೀಡಲು ಹಂಚಿಕೆ ಮಾಡಲಾಗಿತ್ತು. ಜೂನ್‌ ಕಂತಿನ ಬಿಡುಗಡೆ ಬಳಿಕ ರಾಜ್ಯಗಳಿಗೆ ಈವರೆಗೆ ಒಟ್ಟು 2,79,500 ಕೋಟಿ ಬಿಡುಗಡೆ ಮಾಡಿದಂತಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT